ಉಡುಪಿ : ಜೂನ್ 20:ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ನಾಳೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನದಂತೆ ಜಿಲ್ಲಾ ಉಪನಿರ್ದೇಶಕರು ಹಾಗೂ ಉಪ ಸಮನ್ವಯ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದೆ.
ಜೂ.25ರೊಳಗೆ ಫೋಟೋ ಜತೆ ವರದಿಯನ್ನು ಕಚೇರಿಗೆ ಸಲ್ಲಿಸಲು ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ.