ಕಾರ್ಕಳ:ಜೂನ್ 21:ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಾದರೆ ಎಲ್ಲಾ ವಸ್ತುಗಳ ದರ ತನ್ನಷ್ಟಕ್ಕೆ ಏರಿಕೆಯಾಗುತ್ತದೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ಕಚ್ಚ ಸಾಮಗ್ರಿಗಳನ್ನು ಸಾಗಿಸುದಾದರೆ ವಾಹನ ಗಳನ್ನು ಬಳಸಬೇಕಾಗುತ್ತದೆ. ರಾಜ್ಯದ ಜನರಿಗೆ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿ ಜನರಿಗೆ ಬಹಳ ದೊಡ್ಡ ಹೊಡೆತ ಸರಕಾರ ನೀಡಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಬೇಕಾದರೆ ರಾಜ್ಯ ಜನರಿಗೆ ಗ್ಯಾರಂಟಿಗಳ ಅಮೀಷವಡ್ಡಿ ಗೆದ್ದು ಬಂದು ಈಗ ಜನರನ್ನು ಲೂಟಿ ಮಾಡುವ ಕೆಲಸದಲ್ಲಿ ನಿರತವಾಗಿದೆ ಬಡಜನರ ಜೆಬಿಗೆ ಕತ್ತರಿ ಹಾಕಿ ದೋಚಲು ಪ್ರಾರಂಭಿಸಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಕಾರ್ಕಳ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ಗಾರರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ದ್ವಿಚಕ್ರ ವಾಹನವನ್ನು ತಳ್ಳುತ್ತಾ, ಲಾರಿಯನ್ನು ಹಗ್ಗದಿಂದ ಕಟ್ಟಿ ಎಳೆಯುತ್ತಾ, ಮಹಿಳಾ ಕಾರ್ಯಕರ್ತರು ಕೈಯಲ್ಲಿ ಚಂಬು ಮತ್ತು ತೆಂಗಿನಕಾಯಿಯ ಗರಿಟೆಯನ್ನು ಪ್ರದರ್ಶಿಸುತ್ತಾ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗುತ್ತಾ ಕಾರ್ಕಳ ಬಸ್ ನಿಲ್ದಾಣದ ವರೆಗೆ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ಮಾತನಾಡಿದ ಮಹಿಳಾ ಮೋರ್ಚ ಅಧ್ಯಕ್ಷರಾದ ರೇಷ್ಮಾ ಅವರು ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಗ್ಯಾರಂಟಿಗಳ ಅಮಿಷ ತೋರಿಸಿ ಈಗ ಹಣವನ್ನು ಕ್ರೂಡಿ ಕರಿಸಲು ಆಗದೆ ಅಗತ್ಯ ವಸ್ತುಗಳ ಬೆಲೆ ಏರಿಸಿ, ಖಾಲಿ ಖಜನೆ ತುಂಬಿಸಿಕೊಳ್ಳಲು ಜನರ ಮೇಲೆ ಬೆಲೆ ಏರಿಕೆಯ ಬರೇ ಏಳಿದಿದೆ ಕೂಡಲೇ ರಾಜ್ಯದ ಮುಖ್ಯಮಂತ್ರಿ, ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು ಮಾತನಾಡಿದರು.
ಮಣಿರಾಜ್ ಶೆಟ್ಟಿ, ಮಹಾವೀರ್ ಹೆಗಡೆ, ಉದಯ ಕೋಟಿಯನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
ಉಡುಪಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಪರಮೇಶ್ವರ್ ಹೆಗಡೆ, ಹಾಗೂ ಪೊಲೀಸ್ ಉಪಾಧಿಕ್ಷಕರಾದ ಅರವಿಂದ ಕಲಗಜ್ಜಿ ಇವರ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತಿ ನೊಂದಿಗೆ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು
ವರದಿ :ಅರುಣ್ ಭಟ್ ಕಾರ್ಕಳ