ಉಡುಪಿ : ಜೂನ್ 22: ರಾಜ್ಯಾದ್ಯಂತ ಮುಂಗಾರು ಮಳೆ ಕಳೆದ ಒಂದು ವಾರದಿಂದ ತುಸು ಕಡಿಮೆಯಾಗಿತ್ತು. ಇದೀಗ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಪೂರ್ವ ಅರಬ್ಬೀ ಸಮುದ್ರದ ಕೇರಳ, ಕರ್ನಾಟಕ ಕರಾವಳಿ ಉದ್ದಕ್ಕೂ ಸುಳಿಗಾಳಿ ಪರಿಣಾಮ ಕರಾವಳಿ ಭಾಗದಲ್ಲಿ ಇವತ್ತಿನಿಂದ 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, 25ರ ವರೆಗೆ ಕರಾವಳಿ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.