ಕಾರ್ಕಳ :ಜೂನ್ 23:ಪಾದಾಚಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬಾಲಕಿ ಮೃತಪಟ್ಟ ಘಟನೆ ನಂದಳಿಕೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ.
ಮುಲ್ಲಡ್ಕ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರಣಮ್ಯ 14 ವರ್ಷ ಮೃತಪಟ್ಟ ದುರ್ದೈವಿ .
ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ರಸ್ತೆ ಬಗ್ಗೆ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಪ್ರಣಮ್ಯ ಶೆಟ್ಟಿ ಎಂಬವರಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಮೃತಪಟ್ಟಿರುತ್ತಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ