ಉಡುಪಿ:ಜೂನ್ 27: ಜಿಲ್ಲೆಯಾದ್ಯಂತ ಎದೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಆದಿ ಉಡುಪಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ಮಲ್ಪೆ ರಾ. ಹೆದ್ದಾರಿ ತಾತ್ಕಾಲಿಕ ಬಂದ್ ಆಗಿದೆ.
ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಗಾಳಿಸಹಿತ ನಿರಂತರ ಮಳೆ ಸುರಿಯುತ್ತಿದ್ದು, ಹಲವೆಡೆ ಸಾಕಷ್ಟು ಹಾನಿ ಸಂಭವಿಸಿದೆ. ಆರೇಳು ವಿದ್ಯುತ್ ಕಂಬ ಸಹಿತ, ವಿದ್ಯುತ್ ಲೈನ್ ಗಳು ನೆಲಕ್ಕೆಉರುಳಿ ಹಾನಿ ಸಂಭವಿಸಿದೆ.
ಉಡುಪಿ- ಮಲ್ಪೆ ಹೆದ್ದಾರಿ ಸಂಪರ್ಕ ತಾತ್ಕಾಲಿಕ ಬಂದ್ ಆಗಿದ್ದು, ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿದೆ.