ನವದೆಹಲಿ: ಜೂನ್ 27: ಇಂದು ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು ಈ ಯೋಜನೆಯ ಫಲಾನುಭವಿಗಳಿಗೆ ಉಚಿತ ಸೇವೆ ಸಿಗಲಿದೆ ಎಂದು ತಿಳಿಸಿದರು.
ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ದೇಶದಲ್ಲಿ 25 ಸಾವಿರ ಜನೌಷಧ ಕೇಂದ್ರಗಳನ್ನು ತರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಮುರ್ಮು ಅವರು ಹೇಳಿದರು.
ಎಬಿ-ಎನ್ಎಚ್ಪಿಎಂ 50 ಕೋಟಿ ಜನರಿಗೆ ಉಪಯೋಗ ಆಗಲಿದ್ದು, ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿರುವುದು ವಿಶೇಷವಾಗಿದೆ.