ಕಾರ್ಕಳ :ಜೂನ್ 29: ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್‌ಅಪಘಾತ ಗೊಂಡು ನವವಿವಾಹಿತೆ ಮೃತಪಟ್ಟ ಘಟನೆ ಜೂ 28 ರ ಸಂಜೆ ಹೊಸ್ಮಾರು ಬಳಿ ನಡೆದಿದೆ
ಮೃತಪಟ್ಟ ಮಹಿಳೆಯನ್ನು ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26)ಎಂದು ಗುರುತಿಸಲಾಗಿದೆ
ಮದುವೆಯಾಗಿ ಮೂರುತಿಂಗಳು ಕಳೆದಿದ್ದು ಇವರು ಗಂಡನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ರಸ್ತೆಗೆ ಅಡ್ಡ ಬಂದಿದ್ದು, ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು.
ಘಟನೆಯಿಂದ ಸಹಸವಾರೆ ನೀಕ್ಷಾ ಅವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.
ನೀಕ್ಷಾ ಅವರ ತಂದೆ ಪ್ರೀತಿ ಟೈಮ್ಸ್ ಸೆಂಟರ್ ಮಾಲಕ ಪ್ರಕಾಶ್ ಅವರು 9 ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದಾರೆ ಎನ್ನಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.