ಶಿರಸಿ:ಜೂನ್ 02:ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯ ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ.
ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್ ೯
ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ ೯ ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.
ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತು ಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ.