ಉಡುಪಿ : ಜುಲೈ 03 :ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಮಳೆ ಮತ್ತೆ ಬಿರುಸು ಪಡೆಯುವ ನಿರೀಕ್ಷೆ ಇದೆ.
ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜು. 3, 4ರಂದು “ಎಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಜು. 5, 6ರಂದು “ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.
ಮಂಗಳವಾರ ಸಾಧಾರಣ ಮಳೆಯಾಗಿದ್ದು, ಸೋಮವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಮಲ್ಪೆ, ಮಣಿಪಾಲ, ಕಾಪು, ಬ್ರಹ್ಮಾವರ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.