ಕುಂದಾಪುರ : ಜುಲೈ 04:ಮಳೆ ಬಂದರೆ ಇಲ್ಲಿ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು
ಓಟು ಕೇಳಲು ಬರುವ ಜನಪ್ರತಿನಿಧಿಗಳು ಮಳೆಗಾಲದ ನೆರೆ ಸಮಯ ಬಂದು ವೀಕ್ಷಿಸಿ ಹೋದವರು ಮತ್ತೆ ಈ ಕಡೆ ತಲೆಯನ್ನು ಹಾಕೋದಿಲ್ಲ. ಸರ್ಕಾರಿ ಅಧಿಕಾರಿಗಳು ಮಳೆಗಾಲದ ಮೊದಲು ಪ್ರವಾಹದ ಬಂದು ಸ್ಥಳವನ್ನು ವೀಕ್ಷಿಸುತ್ತಾರೆ ಹೊರತು ಇದುವರೆಗೂ ಯಾವುದೇ ಪ್ರಯೋಜನವಾಗಲಿಲ್ಲ
ಯುವಕರ ಶ್ರಮದಾನ…
ನಾವುಂದ, ಬಡಾಕೆರೆ,ಮರವಂತೆ ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದ ಇಲ್ಲಿನ ಜನಕ್ಕೆ ಮಳೆಗಾಲ ಶಾಪವೆಂದರೂ ತಪ್ಪಾಗದು. ಮಳೆಗಾದಲ್ಲಿ ಇಲ್ಲಿಗಾಗಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು. ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ತಿಳಿದವರು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.
ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕೂಡ ನರೇ ಪ್ರದೇಶಕ್ಕೆ ಕಾರ್ಯಚರಣೆ ನಡೆಸುತ್ತಿದ್ದಾರೆ
ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್ ತಾಲೂಕು ಪಂಚಾಯತಿಯು ಭಾರತಿ ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ ಗ್ರಾಮ ಪಂಚಾಯತ್ ನಾವುಂದ ,ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು