ಉಡುಪಿ :ಜುಲೈ 04:ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ (LED) ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ.
ಕೇಂದ್ರ ಮೋಟಾರು ಕಾಯ್ದೆ (CMV)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು.
ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.