ಕುಂದಾಪುರ: ಜುಲೈ 05: ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ.
ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು