ಉಡುಪಿ ಜು.6 : ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ಬೆಳಿಗ್ಗೆ 10:30 ರಿಂದ ಸಂಜೆ 4 ರವರೆಗೆ ರಾಷ್ಟ್ರೀಯ ಲೋಕ-ಅದಾಲತ್ ನಡೆಯಲಿದೆ
ಉಡುಪಿ,ಕುಂದಾಪುರ, ಕಾರ್ಕಳ, ಬ್ರಹ್ಮಾವರ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಅಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಸ್ಥಳೀಯ ನ್ಯಾಯಾಲಯ ವ್ಯಾಪ್ತಿಯ ಕೇಸುಗಳಲ್ಲಿ ರುವ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ್ಯಪಡಿಸಿಕೊಳ್ಳಬಹುದಾಗಿದೆ.
ಜು.13ರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸುಮಾರು 30ಸಾವಿರದಷ್ಟು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಈಗ ಬಾಕಿ ಉಳಿದಿರುವ 15,383 ಸಿವಿಲ್ ಮೊಕದ್ದಮೆ ಹಾಗೂ 19,502 ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸುಮಾರು 3000 ಪ್ರಕರಣಗಳನ್ನು ಅಂದು ಇತ್ಯರ್ಥ ಪಡಿಸುವ ಗುರಿ ಯನ್ನು ಇಟ್ಟುಕೊಳ್ಳಲಾಗಿದೆ
ಅಂದು ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂಎಂಡಿಆರ್ ಪ್ರಕರಮ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀರಣ ಪ್ರಕರಣಗಳು, ಕಾರ್ಮಿಕ ವಿವಾದ, ಉದ್ಯೋಗ ಮರು ಸ್ಥಾಪಿಸುವ ಪ್ರಕರಣ ಹಾಗೂ ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳನ್ನು ಇಲ್ಲಿ ರಾಜಿಯೊಂದಿಗೆ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ .
ಅಲ್ಲದೇ ವಿಚ್ಛೇದನ ಹೊರತು ಪಡಿಸಿ ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು, ಭೂಸ್ವಾಧೀನದ ಪರಿಹಾರ ಪ್ರಕರಣಗಳು, ಪರಿಹಾರ ಹಂಚಿಕೆ ಪ್ರಕರಣಗಳು, ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣ ಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ
ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವನ್ನು ತೀರ್ಮಾನಿಸಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುತ್ತದೆ ಎನ್ನಲಾಗಿದೆ