ಉಡುಪಿ : ಜುಲೈ 08:ಉಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ಮಂಗಳವಾರ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:08.07.2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:09.07.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ,