ಉಡುಪಿ:ಜುಲೈ 09: ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸ್ಟಾರ್ ಕ್ರಿಕೆಟರ್‌ಗೆ ಭವ್ಯ ಸ್ವಾಗತ ಕೋರಲಾಯಿತು.
ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ದಂಪತಿ ಭೇಟಿ ನೀಡಿದರು. ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಕ್ರಿಕೆಟಿಗ ಮಾಹಿತಿ ಪಡೆದುಕೊಂಡರು.
ದೇವಸ್ಥಾನಕ್ಕೆ ಭೇಟಿ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ. ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದು ತಿಳಿಸಿದರು.