ಬೆಂಗಳೂರು : ಜುಲೈ 09:ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು.
ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.