ಬೆಂಗಳೂರು:ಜುಲೈ 10:ಗೃಹಲಕ್ಷ್ಮಿ ಯೋಜನೆಯ ಜೂನ್-ಜುಲೈ ತಿಂಗಳ ಹಣ ಜಮಾ ಆಗಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.#Gruhalakshmi@CMofKarnataka @siddaramaiah @laxmi_hebbalkar pic.twitter.com/pCVJjOol9T
— DIPR Karnataka (@KarnatakaVarthe) July 8, 2024