ಉಡುಪಿ : ಜುಲೈ 11:ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ಒಳನಾಡಿನಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ವಿಜಯಪುರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.