ಬೆಂಗಳೂರು :ಜುಲೈ 12:ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.