ಉಡುಪಿ : ಜುಲೈ 12 :ಉಡುಪಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977 ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗಿದ್ದು, ಪ್ರಸ್ತುತ ಸದರಿ ಹುದ್ದೆಗೆ ಹೊಸದಾಗಿ ನೇಮಕಾತಿ ಮಾಡಲು ಸರಕಾರವು ಉದ್ದೇಶಿಸಿದ್ದು, ಜಿಲ್ಲಾ ಸರ್ಕಾರಿ ವಕೀಲರಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ, 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಈ ಬಗ್ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
1) ವಕೀಲರ ವೃತ್ತಿಯಲ್ಲಿ ಕನಿಷ್ಟ 10(ಹತ್ತು) ವರ್ಷಗಳ ಅನುಭವ ಇರಬೇಕು.
2) ಅರ್ಜಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಶಿಫಾರಸ್ಸುಗೊಂಡ ನಂತರವೇ ಸರಕಾರಕ್ಕೆ ಸಲ್ಲಿಕೆಯಾಗಲು ಅರ್ಹತೆ ಪಡೆಯುತ್ತದೆ.
3) ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
4) ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸ್ವೀಕರಿಸಲು ಕೊನೆಯ ದಿನಾಂಕ 25.07.2024 ರ ಕಛೇರಿ ವೇಳೆ ಸಮಯ ಅಪರಾಹ್ನ 5.30 ಆಗಿರುತ್ತದೆ.
5) ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಪಡೆಯಬಹುದು.