ಮಂಗಳೂರು :ಜುಲೈ 13:ಮಂಗಳೂರಿನ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ದ.ಕ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಡಾ.ಎಂ. ಪಿ. ಶ್ರೀನಾಥ, ಎಂ.ಆರ್. ಪಿ.ಎಲ್ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ ಮೀನಾಕ್ಷಿ, ಕಾರ್ಪೊರೇಟರ್ ಗಣೇಶ್ ಕುಲಾಲ್, ತರೀಕರೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸಬಿತಾ ಬನ್ನಾಡಿ, ಹಿರಿಯ ಲೇಖಕರಾದ ಇಂದಿರಾ ಹಾಲಂಬಿ, ಮುಖ್ಯಮಂತ್ರಿಯವರ ಮಾಜಿ ಸಂಸದೀಯ ಕಾರ್ಯದರ್ಶಿ ಶಕುಂತಲಾ ಶೆಟ್ಟಿ, ಸಂಘದ ಅಧ್ಯಕ್ಷರಾದ ಜ್ಯೋತಿ ಚೇಳ್ಯಾರು ಮುಂತಾದವರು ಉಪಸ್ಥಿತರಿದ್ದರು.