ಉಡುಪಿ:ಜುಲೈ 15: ಜು.15ರ ಸೋಮವಾರ ಮುಂಜಾನೆ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಾಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳಿಬ್ಬರು ಮನೆಯ ಮೇಲಿನ ಮಹಡಿಯಲ್ಲಿದ್ದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಎಸಿ ಯೂನಿಟ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.