ಕುಕ್ಕೆ ಸುಬ್ರಹ್ಮಣ್ಯ: ಜುಲೈ 14: ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ ಸಲ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚಿಸಲಾಗಿದೆ
ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದೆ. ಅಲ್ಲದೇ ಕುಮಾರಧಾರ ಉಪನದಿ ದರ್ಪಣ ತೀರ್ಥ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.