ಉಡುಪಿ : ಜುಲೈ 17:ಉಡುಪಿಯ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆಯನ್ನು ಆಯೋಜಿಸಿಲಾಗಿತ್ತು
ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು ತಕ್ಷಣದಲ್ಲಿ ಸ್ಥಳಕ್ಕೆ ಆಗಮಿಸಿ ತಾತ್ಕಲಿಕ ತೇಪೆಹಾಕುವ ಕಾಮಗಾರಿಗೆ ವ್ಯವಸ್ಥೆಗೊಳಿಸಿದರು.
ಮಳೆಗಾಲ ಮುಗಿದ ಬಳಿಕ ಮರು ಡಾಂಬರೀಕರಣಗೊಳಿಸುವ ಭರವಸೆ ನೀಡಿದರಿಂದ, ಒಳಕಾಡುವರು ಪ್ರತಿಭಟನೆಯನ್ನು ರದ್ದುಗೊಳಿಸಿದರು. ಪೌರಾಯುಕ್ತರ ತಕ್ಷಣದ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.