ಉಡುಪಿ: ಜುಲೈ 18 :ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 2023- 24ನೇ ಸಾಲಿನಲ್ಲಿ ನಡೆದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.