ಬೆಂಗಳೂರು : ಜುಲೈ 19:ಬೆಂಗಳೂರಿನ ಆರು ಕಡೆ ಸೇರಿದಂತೆ ರಾಜ್ಯಾದ್ಯಂತ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು, ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಯಾದಗಿರಿ, ತುಮಕೂರು ಜಿಲ್ಲೆಯಲ್ಲಿ ತಲಾ ಓರ್ವ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.