ಉಡುಪಿ : ಜುಲೈ 19: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಜುಲೈ 20ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ