ಕಾಪು :ಜುಲೈ 20: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.