ಉಡುಪಿ :ಜುಲೈ 23:ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ , ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಮತ್ತು ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಪ್ರತಿಭಟನೆಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ಉಡುಪಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ವಾಣಿಜ್ಯ ವಾಹನಗಳು, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಬಾರದಾಗಿ ಸರ್ಕಾರವನ್ನು ಒತ್ತಾಯಿಸಿದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯಕ್ ಅವರಿಗೆ ಮನವಿ ಸಲ್ಲಿಸಲಾಯಿತು
ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಕಷ್ಟ ಸಾಧ್ಯ ಅದರ ವೆಚ್ಚವನ್ನು ಮಧ್ಯಮ ವರ್ಗದ ನಾವು ದುಬಾರಿ ವೆಚ್ಚ ಬರಿಸಲು ಸಾಧ್ಯವಿಲ್ಲ.. ಹೊಸ ಪ್ರವಾಸಿ ವಾಹನಗಳಿಗೆ ಇದನ್ನು ಕಡ್ಡಾಯ ಗೊಳಿಸಲಿ.. ಹಳೆ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅವಶ್ಯಕತೆ ಇಲ್ಲ.. ಜೊತೆಗೆ ಸರ್ಕಾರದಿಂದ ನವೆಂಬರ್ ತನಕ ಅವಕಾಶ ಇದ್ದರು ಕೂಡ ಸ್ಥಳೀಯ ಅಧಿಕಾರಿ ಗಳು ಎಫ್ ಸಿ ನವಿಕರಣ ಮಾಡುತ್ತಿಲ್ಲ.. ಹೀಗಾಗಿ ನಾವು ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಹಿಂಪಡೆಯುವ ವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು
ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.