ಹೆಬ್ರಿ :ಜುಲೈ 26: ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಗಾಳಿ ಮಳೆಯಿಂದ ತರಗತಿ ನಡೆಸಲು ಅನಾನುಕೂಲವಾಗುತ್ತಿದ್ದಲ್ಲಿ, ಅಥವಾ ಮಳೆ ಜೋರಾಗಿದ್ದಲ್ಲಿ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಮತ್ತು ಶಾಲಾ ಪರಿಸ್ಥಿತಿ ನೋಡಿಕೊಂಡು ರಜೆ ನೀಡಲು ಬಿಇಒಗಳಿಗೆ ಕುಂದಾಪುರ ಹಾಗೂ ಬೈಂದೂರಿನ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.
ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.26ರ ಶುಕ್ರವಾರ ರಜೆ ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಐ.ಟಿ.ಐ. ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಹೆಬ್ರಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.