ಮಂಗಳೂರು , ಜುಲೈ 27: ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿದೆ
ಕಿಲೋ ಮೀಟರ್ ನಂಬರ್ 63ರಲ್ಲಿ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಸದ್ಯ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿಗಳು ದೌಡಾಸಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳಿಂದ ರೈಲು ಮಾರ್ಗ ಬದಲಿಸಲಾಗಿದೆ.