ಉಡುಪಿ : ಜುಲೈ 27: ಉಡುಪಿಯ ಪೆರಂಪಳ್ಳಿಯಲ್ಲಿರುವ ಮನೆಯೊಂದರ ಕಾಂಪೌಂಡ್ ಒಳಗೆ ಚಿರತೆ ಕಾಣಿಸಿಕೊಂಡ ಘಟನೆ ನಿನ್ನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮನೆಯ ಹೊರಭಾಗದಲ್ಲಿ ನಾಯಿ ಬೊಗಳುತ್ತಿದ್ದುದನ್ನು ಗಮನಿಸಿದ ಮನೆ ಮಂದಿ ಬಾಗಿಲು ತೆಗೆದಿರಲಿಲ್ಲ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ.
ಬೆಳಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದ್ರಶ್ಯ ಕಂಡು ಹೆದರಿದ್ದಾರೆ .
ರಾತ್ರಿ ಇಡೀ ಕಣ್ಮರೆಯಾಗಿದ್ದ ನಾಯಿ ಬೆಳಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ರಕ್ಷಿಸಲ್ಪಟ್ಟಿದೆ ಎನ್ನಲಾಗಿದೆ. ಈ ಘಟನೆಯಿಂದ ಮಣಿಪಾಲ, ಪೆರಂಪಳ್ಳಿ ಭಾಗದ ಜನರು ಭಯಭೀತರಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕ್ಯೆಗೊಳ್ಳುವಂತೆ ಮನವಿ ಮಾಡಿದ್ದಾರೆ