ಕುಂದಾಪುರ :ಜುಲೈ 27:ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಕುಂದಾಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಮಹೇಶ್‌ಚಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಹೇಶ್‌ಚಂದ್ರ ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.