ಒಲಿಂಪಿಕ್ಸ್ 2024: ಜುಲೈ 28: 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ.
ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕಳೆದ ಒಲಿಂಪಿಕ್ಸ ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಯಾವುದೇ ವಿಭಾಗದಲ್ಲೂ ಅರ್ಹತೆ ಪಡೆಯಲು ವಿಫಲರಾಗಿದ್ದ 22 ವರ್ಷದ ಮನು ಭಾಕರ್ ಅವರಿಗೆ ಇದು ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವಾಗಿದೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 221.7 ಪಾಯಿಂಟ್‌ಗಳನ್ನು ಸಂಪಾಧಿಸಿದ ಮನು ಭಾಕರ್ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಮುತ್ತಿಕ್ಕಿದರೆ, ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಮುತ್ತಿಟ್ಟರು.