ಉಡುಪಿ : ಜುಲೈ 30 :ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಈಗಾಗಲೇ ಸುಮಾರು ರೂ. 13 ಲಕ್ಷ ಅನುದಾನವನ್ನು ಕಿರು ಸೇತುವೆಯ ಮರು ನಿರ್ಮಾಣಕ್ಕೆ ಮಂಜೂರು ಮಾಡಿದ್ದು ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀಮತಿ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಸ್ಥಳೀಯ ಮುಖಂಡರಾದ ಶ್ರೀ ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.