ಕೊಡಗು : ಜುಲೈ 31:ಕರ್ನಾಟಕದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೀಗಾಗಿ ಜಿಲ್ಲೆಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳು ಬುಧ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.