ಉಡುಪಿ :ಜುಲೈ 31:ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ- ಕೇರಳ ಇದರ ವತಿಯಿಂದ ಸಮುದಾಯದ ಯುವ ಜನರ 100% ಉದ್ಯೋಗ ಭರವಸೆ ಈಡೇರಿಕೆಗಾಗಿ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಕಳೆದ 7 ದಿನಗಳಿಂದ ನಡೆಸುತ್ತಿರುವ ಅಹೋ ರಾತ್ರಿ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಚಿವ ಪ್ರಮೋಧ್ ಮಧ್ವಾರಾಜ್ ಭಾಗವಹಿಸಿದರು
ಈ ಸಂದರ್ಭದಲ್ಲಿ ಕೊರಗ ಸಮುದಾಯದ ಜೊತೆಯಲ್ಲಿ ತಾವಿರುವುದಾಗಿ ತಿಳಿಸಿ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಮನವಿ ಮಾಡಿದರು