ಹಾಸನ:ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಪರಿಣಾಮ ಭಾರಿ ಮಳೆಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನಲ್ಲಿ ಘಟನೆ ನಡೆದಿದ್ದು, ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.
ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ ಎನ್ನಲಾಗಿದೆ
ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.