ಬೆಂಗಳೂರು: ಆಗಸ್ಟ್ 02:ಡ್ರೋನ್ ನಿರ್ವಹಣೆಯ ಮೂಲಕ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗಲು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿ ಗಳಿಗಾಗಿ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ಕಾಲ ವಸತಿ ಸಹಿತ ತರಬೇತಿ ನೀಡಲಾಗುತ್ತದೆ.
ತರಬೇತಿಯನ್ನು ಯಶಸ್ವಿಯಾಗಿ ಪೂರ್ಣ ಗೊಳಿಸುವವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ, ಕೃಷಿ, ಗಣಿ, ಲಾಜಿಸ್ಟಿಕ್ಸ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಡ್ರೋನ್ ಗಳು ಬಳಕೆಯಾಗುತ್ತಿರುವುದರಿಂದ ಉದ್ಯೋಗವಕಾಶಗಳು ಹೆಚ್ಚುತ್ತಿವೆ.
ಈ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ 5 ಸಾವಿರ ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.
ಆಗಸ್ಟ್ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ 18 ರಿಂದ 65 ವರ್ಷದೊಳಗಿನ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ petc. kar.nic.in ವೆಬ್ಸೈಟಿಗೆ ಭೇಟಿ ನೀಡಬಹುದು