ಉಡುಪಿ :ಆಗಸ್ಟ್ 02: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. PM-ABHIM ಯೋಜನೆ ಅಡಿಯಲ್ಲಿ ಉಡುಪಿ ಜಿಲ್ಲೆಯ 6 ನಮ್ಮ ಕ್ಲಿನಿಕ್ಗಳಿಗೆ ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.
ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 3, 2024 ಅಂದರೆ ನಾಳೆ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಆಸಕ್ತರು ಆಫ್ಲೈನ್/ ಪೋಸ್ಟ್ ಮುಖಾಂತರ ಅರ್ಜಿ ಹಾಕಬೇಕು.
ಶೈಕ್ಷಣಿಕ ಅರ್ಹತೆ:ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೊಮಾ, ಪಿಯುಸಿ ಪೂರ್ಣಗೊಳಿಸಿರಬೇಕು.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 14,044-15,397 ಸಂಬಳ ಕೊಡಲಾಗುತ್ತದೆ.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಡುಪಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಿಲ್ಲ.ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ವಯ ಮತ್ತು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೋಸ್ಟರ್ ಪ್ರಕಾರ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ, ಮುಂದಿನ ರೋಸ್ಟರ್ ಬಿಂದುವಿನ ಅಭ್ಯರ್ಥಿಗೆ ಅವಕಾಶ ನೀಡಲಾಗುತ್ತದೆ.
ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.
₹15,000 ಕ್ಕಿಂತ ಕಡಿಮೆ ವೇತನ ಇರುವ ಹುದ್ದೆಗೆ PF ಸೌಲಭ್ಯ ನೀಡಲಾಗುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಆಗಸ್ಟ್ 3 ಅಂದರೆ ನಾಳೆ ಸಂಜೆ 4 ಗಂಟೆಯೊಳಗೆ ಕಳುಹಿಸಬೇಕು.
ಜಿಲ್ಲಾ ಯೋಜನಾ ನಿರ್ವಹಣಾ ಘಟಕNHM ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಉಡುಪಿ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2985429 ಗೆ ಕರೆ ಮಾಡಿ. ಹೆಚ್ಚಿನ ಮಾಹಿತಿಗೆ udupi.nic.in ಭೇಟಿ ನೀಡಬಹುದು