ಉಡುಪಿ: ಆಗಸ್ಟ್ 02:ಇಂದ್ರಾಳಿ ರೈಲ್ವೇ ನಿಲ್ದಾಣಕ್ಕೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನಿಲ್ದಾಣದ ಮೂಲ ಸೌಕರ್ಯಗಳ ಸಮಸ್ಯೆ ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದರು.
ಪ್ರಯಾಣಿಕರ ಅನುಕೂಲಕ್ಕಾಗಿ ಪ್ಲ್ಯಾಟ್ ಫಾರಂಗಳ ಮೇಲೆ ಮೇಲ್ಛಾವಣಿ ನಿರ್ಮಾಣ, ಸ್ವಚ್ಚತೆ, ಸುರಕ್ಷಾ ದೃಷ್ಟಿಯಿಂದ ಸೂಕ್ತ ಭದ್ರತಾ ವ್ಯವಸ್ಥೆ, ಸಮರ್ಪಕ ದಾರಿ ದೀಪ ನಿರ್ವಹಣೆ ಸಹಿತ ನಿಲ್ದಾಣದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೂಡಲೇ ರೈಲ್ವೆ ಇಲಾಖೆಗೆ ತಕ್ಷಣ ವಿಸ್ತೃತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣದ ಉನ್ನತೀಕರಣದ ಕಾಮಗಾರಿಗಳು ಶೀಘ್ರದಲ್ಲೇ ಆರಂಭಗೊಳ್ಳಲಿದ್ದು, ಖಾಸಗಿ ಕಂಪೆನಿಗಳ ಸಿ ಎಸ್ ಆರ್ ಅನುದಾನದ ಮೂಲಕ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಪ್ರಯತ್ನದ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈಲ್ವೆ ಇಲಾಖೆ ಹಾಗೂ ನಗರ ಸಭೆಯ ಅಧಿಕಾರಿಗಳು, ಪಕ್ಷದ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.