ಕೋಲ್ಕತ್ತಾ : ಆಗಸ್ಟ್ 03:ಭಾರೀ ಮಳೆಯಿಂದಾಗಿ ಕೋಲ್ಕತ್ತಾ, ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್‌ಪುರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೆ ದಿನವಿಡೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.
ಭಾರೀ ಮಳೆಯಿಂದಾಗಿ ಕೊಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಸಂಪೂರ್ಣ ಜಲಾವೃತಗೊಂಡಿದೆ.
ಭಾರಿ ಮಳೆಯ ಪರಿಣಾಮ ವಿಮಾನ ನಿಲ್ದಾಣದ ರನ್ ವೇ ಯಲ್ಲಿ ಅಪಾರ ಪ್ರಮಾಣದ ನೀರು ನಿಂತಿದ್ದು ಜೊತೆಗೆ ಪಾರ್ಕಿಂಗ್ ವಲಯದಲ್ಲೂ ಹೆಚ್ಚಿನ ಪ್ರಮಾಣದ ನೀರು ನಿಂತಿರುವುದು ಕಂಡುಬಂದಿದ್ದು ಆದರೆ ವಿಮಾನಯಾನ ಅಧಿಕಾರಿಗಳ ಮಾಹಿತಿಯ ಪ್ರಕಾರ ವಿಮಾನ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಹೇಳಿದ್ದಾರೆ.