ಉಡುಪಿ: ಆಗಸ್ಟ್ 05:ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದ ವಿಚಾರಕ್ಕೆ ಸಂಬಂದಿಸಿ ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರಿನ ಮನೆಗೆ ತೆರಳಿ ಕಾಂಗ್ರೆಸ್‌ನ ಮುಖಂಡರು ದಬ್ಬಾಳಿಕೆ ರಾಜಕಾರಣವನ್ನು ತೋರಿದ್ದಾರೆ ಎನ್ನಲಾಗಿದ್ದು ಇಂದು ಸೋಮವಾರ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಪ್ರತಿಭಟನೆಯ ಬಳಿಕ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ,ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಕಾರ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್,ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ್ ಹೆಗ್ಡೆ,ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಉದಯ ಕೋಟ್ಯಾನ್ ಧನ್ಯವಾದಗಳನ್ನು ಸಲ್ಲಿಸಿದರು