ಉಡುಪಿ: ಆಗಸ್ಟ್ 06:ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರ ದರ್ಶನ ಚಂದನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆಗಸ್ಟ್ . 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.