ಪ್ಯಾರಿಸ್ ಒಲಿಂಪಿಕ್ಸ್: ಆಗಸ್ಟ್ 06 :ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.
89.34 ಮೀಟರ್ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ.
ಈ ಹಿಂದೆ ಅವರು 89.94 ಮೀ ಎಸೆತ ಮೂಲಕ ಇತಿಹಾಸ ಸೃಷ್ಟಿಸಿದರು. ಚೋಪ್ರಾ ಅವರು ವೈಯಕ್ತಿಕ ಒಲಿಂಪಿಕ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಜಾವೆಲಿನ್ನಲ್ಲೂ ಹಾಗೂ ಒಲಿಂಪಿಕ್ ಹೊಸ ಅಧ್ಯಾಯವನ್ನು ಸೃಷ್ಟಿಸಿದರು. ಇನ್ನು ಅಂತಿಮ ಪಂದ್ಯ ಆಗಸ್ಟ್ 8 ರಂದು ನಡೆಯುವ ಸಾಧ್ಯತೆ ಇದೆ.