ಉಡುಪಿ: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು.
ಕಾರ್ಯಾಲಯ ಬೆಳಿಗ್ಗೆ 9ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ ಶ್ರೀಮತಿ ಸುಮಿತ್ರಾ ಕೆರೆಮಠ 9035679905ನ್ನು ಸಂಪರ್ಕಿಸಬಹುದು.
ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಕೋಶಾಧಿಕಾರಿ ರಂಜನ್ ಕಲ್ಕೂರ, ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಸಮಿತಿ ಸದಸ್ಯರು ಮೊದಲಾದವರಿದ್ದರು.