ಉಡುಪಿ : ಆಗಸ್ಟ್ 15:ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.
ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿದರು.
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ., ಅಪರ ಜಿಲ್ಲಾಧಿಕಾರಿ ಶ್ರೀಮತಿ ಮಮತಾ ದೇವಿ ಹಾಗೂ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.