ಬೆಂಗಳೂರು :ಆಗಸ್ಟ್ 18: ನಟ,ನಿರ್ದೇಶಕ ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಹಾಡುಗಳನ್ನು ಅನಧಿಕೃತವಾಗಿ ಬಳಸಿಕೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ರಕ್ಷಿತ್ ಶೆಟ್ಟಿ ಸಿಲುಕಿದ್ದು, ಎಂಆರ್.ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲು ಏರಿತ್ತು.
ಆದರೆ ರಕ್ಷಿತ್ ಶೆಟ್ಟಿ ದೆಹಲಿ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ ಕಾಪಿ ರೈಟ್ ಉಲ್ಲಂಘನೆಗಾಗಿ 20 ಲಕ್ಷ ಠೇವಣಿ ಇಡಲು ಮತ್ತು ಇನ್ಸ್ಟಾದಲ್ಲಿ ಶೇರ್ ಮಾಡಿರೋ ಹಾಡು ತಗೆಯುವಂತೆ ಆದೇಶ ಹೊರಡಿಸಿದೆ.