ಉಡುಪಿ: ಆಗಸ್ಟ್ 18: ರಥಬೀದಿಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವ ನಡೆಯಲಿದೆ.
ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದದೊಂದಿಗೆ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಹಾಗೂ ಅಷ್ಟಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ಆಗಸ್ಟ್ ತಿಂಗಳ 20,21,22 ಈ ಮೂರು ದಿವಸಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಟಾಗಿದೆ.
ಈ ಬಾರಿ ಎರಡು ದಿನಗಳು ಅಂದರೆ ಆ.21 ಬುಧವಾರ, ಆ.22 ಗುರುವಾರದಂದು ಸಾರ್ವಜನಿಕ ಅನ್ನದಾನ ನಡೆಯಲಿದೆ ಎಂದು ಶ್ರೀ ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ