ಕೊಚ್ಚಿ:ಆಗಸ್ಟ್ 18:ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ.
ಗುಜರಾತಿನಲ್ಲಿ ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಮೃತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಆಸ್ಪತ್ರೆಯು ಬಿಡುಗಡೆ ಮಾಡಿದೆ. 64 ವರ್ಷದ ಮೋಹನ್ಲಾಲ್ ಅವರಿಗೆ ತೀವ್ರ ಜ್ವರ, ಮೈ-ಕೈ ನೋವು ಜೊತೆಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಮೋಹನ್ಲಾಲ್ ಅವರಿಗೆ ಶ್ವಾಸಕೋಶದ ಸೋಂಕು ಆಗಿರುವ ಅನುಮಾನ ಇದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐದು ದಿನಗಳ ಕಾಲ ಔಷಧಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಐದು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ಹಾಗೂ ಐದು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ’ ಎಂದಿದ್ದಾರೆ.